ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು.



ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.


ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾ ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಸಾಥ್ ನೀಡಿದರು.
