HomeFresh Newsಮಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ: ಸಲೀಂ ಅಹ್ಮದ್

ಮಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ: ಸಲೀಂ ಅಹ್ಮದ್

ಶಿಕ್ಷಕರ ಮತ್ತು ಪದವೀಧಕರ ಕ್ಷೇತ್ರದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮ್ಮ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಮತ್ತು ಕೆಕೆ ಮಂಜುನಾಥ್ ಅವರು ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿಯಿಂದ ಅನೇಕ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಜನರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ ಬಂದಿದೆ. ಈ ಕಾರಣದಿಂದಾಗಿ ಹೆಚ್ಚಿನವರು ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದರು.

ಇನ್ನು ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಟ ೨೦ ಸ್ಥಾನ ಗೆಲ್ಲಲಿದೆ. ಹತ್ತು ವರ್ಷ ಬಿಜೆಪಿ ಆಡಳಿತವನ್ನು ಜನತೆ ನೋಡಿದ್ದಾರೆ. ಬಿಜೆಪಿ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಪಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಮೇಯರ್ ಅಶ್ರಫ್, ಶಾಲೆಟ್ ಪಿಂಟೋ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments