ಸುಳ್ಯದ ಸಮಸ್ಯೆಗಳ ಬಗ್ಗೆ ಸಿ ಇ ಓ ಗಮನಕ್ಕೆ ತಂದ ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ನಿಯೋಗ

ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ ಇ ಓ ವಿನಾಯಕ್ ಖರ್ಬಾರಿ ಯವರನ್ನು ತಾಲೂಕು ಪಂಚಾಯತ್ ಕಚೇರಿಯಲ್ಲಿ ಭೇಟಿ ಮಾಡಿದ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಸುಳ್ಯ ತಾಲೂಕಿಗೆ ಸಂಬಂದಿಸಿದಂತೆ ಗ್ರಾಮ ಪಂಚಾಯತ್ ಗಳಲ್ಲಿ ಮತ್ತು ತಾಲೂಕು ಪಂಚಾಯತ್ ನಲ್ಲಿ ಸಿಬ್ಬಂದಿ ಕೊರತೆ, 94ಸಿಸಿ ಹಕ್ಕುಪತ್ರಗಳಿಗೆ 9-11 ಸಮಸ್ಯೆ, ಗ್ರಾಮೀಣ ಭಾಗದಲ್ಲಿ ರಸ್ತೆ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ನಿಯಮಾವಳಿಗಳಿಂದಾಗುವ ಸಮಸ್ಯೆಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿಗಳ ಗಮನಕ್ಕೆ ತರಲಾಯಿತು.
ಅಲ್ಲದೆ ಸುಳ್ಯದ ಹಲವಾರು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಚರ್ಚಿಸಿದರು. ಸಿಬ್ಬಂದಿ ಕೊರತೆ ಮತ್ತು 9-11 ಬಗ್ಗೆ ಆಡಳಿತಾತ್ಮಕವಾಗಿ ಶೀಘ್ರ ಪರಿಹಾರ ಕೈಗೊಳ್ಳುವುದಾಗಿ ಸಿ ಇ ಓ ಪ್ರತಿಕ್ರಿಯಿಸಿದರು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಬರುವ ತೊಡಕುಗಳನ್ನು ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾದಿಸಿಕೊಂಡು ಪರಿಹರಿಸಲು ಪ್ರಯತ್ನಿಸುವುದಾಗಿ ಕಾಂಗ್ರೆಸ್ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದರು.
ಕಾಂಗ್ರೆಸ್ ನಿಯೋಗದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ, ಗ್ರಾ ಪಂ ಸದಸ್ಯ ಸತ್ಯಕುಮಾರ್ ಆಡಿಂಜಾ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಇ ಓ ರಾಜಣ್ಣ, ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.