ಪುತ್ತೂರು; ಕಂಬಳ ಕ್ಷೇತ್ರದ ವೀಕ್ಷಕ ವಿವರಣೆಗಾರರ ಪಂಕ್ತಿಯಲ್ಲಿ ಅಗ್ರಗಣ್ಯರಾಗಿದ್ದ ಕಾಂಗ್ರೇಸ್ ಮುಖಂಡ, ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯ ನಿರಂಜನ್ ರೈ ಮಠಂತಬೆಟ್ಟು (60) ಹೃದಯಾಘಾತದಿಂದ ಬುಧವಾರ ನಿಧನರಾದರು.
ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂನ್ಯಾಯ ಮಂಡಳಿ ಕೋರ್ಟ್ ಕಲಾಪದಲ್ಲಿ ಭಾಗವಹಿಸಿದ್ದ ಅವರಿಗೆ ಸ್ಥಳದಲ್ಲಿಯೇ ಹೃದಯಾಘಾತ ಉಂಟಾಗಿ ಕುಸಿದುಬಿದ್ದರು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಸರಳ ಸಜ್ಜನಿಕೆಯ ಮೃದು ಸ್ವಭಾವದ ನಿರಂಜನ್ ರೈ ಮಠಂತಬೆಟ್ಟು ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಳದ ಆಡಳಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಬಂಟರ ಸಂಘದಲ್ಲಿ ಕ್ರೀಯಾಶೀಲ ವ್ಯಕ್ತಿಯಾಗಿ ಸೇವೆ ಮಾಡಿದ್ದಾರೆ. ಕಂಬಳಕೂಟದಲ್ಲಿ ತುಳುಭಾಷೆಯಲ್ಲಿ ವೀಕ್ಷಕ ವಿವರಣೆ ಮತ್ತು ನಿರೂಪಣೆಯಲ್ಲಿ ಖ್ಯಾತಿಗಳಿಸಿದ್ದರು.


