ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಲಾಲ್‍ಭಾಗ್ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ಬಿಜೆಪಿಯಿಂದ ಪ್ರಜಾಪ್ರಭುತ್ವ ಕೊಲೆಯಾಗಿದ್ದು, ಅದು ಸಂವಿಧಾನ ವಿರೋಧ ನೀತಿ ಅನುಸರಿಸುತ್ತಿದೆ. ಬಿಜೆಪಿ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಈ ನೀತಿ ಖಂಡಿಸಿ ರಾಷ್ಟ್ರಾಧ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಶಾಸಕ ಯು. ಟಿ. ಖಾದರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಮೊಯ್ದಿನ್ ಬಾವಾ, ಶಕುಂತಳಾ ಶೆಟ್ಟಿ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಕಾಂಗ್ರೆಸ್‍ನ ಪ್ರಮುಖ ನಾಯಕರು ಉಪಸ್ಥಿತರಿದ್ದರು.
