ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು ಭರವಸೆಯನ್ನು ನೀಡಿ ಮತ ಪಡೆದು ಯಾವ ಕೆಲಸವನ್ನು ಮಾಡದೆ ಮೋಸ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ನಾನು ಶಾಸಕನಾದರೆ ಮೀನುಗಾರರ ಸಮಸ್ಯೆಗಳಾದ ಪಾರ್ಕಿಂಗ್ ವ್ಯವಸ್ಥೆ , ಶೌಚಾಲಯ, ಮೀನು ಮಾರಾಟಕ್ಕೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆಯನ್ನು ನೀಡಿದರು.
