HomeFresh Newsನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ-ಮಲ್ಲೈ ಮುಗಿಲನ್

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ-ಮಲ್ಲೈ ಮುಗಿಲನ್

ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಹಮ್ಮಿಕೊಂಡ ಜೀವ ಜಲ ಉಳಿಸಿ ಅಭಿಯಾನದ ಜಲ ಸಂರಕ್ಷಣೆಯ ಭಿತ್ತಿ ಪತ್ರ ಬಿಡುಗಡೆ ಗೊಳಿಸಿ, ನೀರಿನ ಪಾತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.
ಈ ನೈಸರ್ಗಿಕ ಸಂಪತ್ತು ಜಗತ್ತಿನ ಈಗಿನ ಮತ್ತು ಭವಿಷ್ಯದ ಸಕಲ ಜೀವರಾಶಿಗಳಿಗೆ ಸೇರಿದೆ ಇದನ್ನು ಮಿತವಾಗಿ ಬಳಸುವುದು ಉಳಿಸುವುದು ಅತೀ ಅಗತ್ಯ ಈ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಪ್ರತಿಯೊಬ್ಬರು ಈ ಬೇಸಗೆಯ ಸಂದರ್ಭದಲ್ಲಿ ನೀರು ಉಳಿಸುವ ಮತ್ತು ಪ್ರಾಣಿ, ಪಕ್ಷಿಗಳ ಜೀವ ರಕ್ಷಣೆಗೆ ತಮ್ಮ ಮನೆಯ ಹಿತ್ತಲಲ್ಲಿ ಸಣ್ಣ ಪಾತ್ರಗಳಲ್ಲಿ ನೀರು ಇಡುವ ಮೂಲಕ ಜೀವ ಕೆಲಸದಲ್ಲಿ ಕೈ ಜೋಡಿಸಬೇಕಾಗಿದೆ ಎಂದು ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಜೀವ ಜಲ ಉಳಿಸಿ ಅಭಿಯಾನಕ್ಕೆ ಬ್ಯಾಂಕ್ ಆಫ್ ಬರೋಡಾದ ಎಲ್ಲಾ ಶಾಖೆಗಳ ಮೂಲಕ ಸಹಕಾರ ನೀಡುವುದಾಗಿ ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕರು ಮತ್ತು ಮಂಗಳೂರು ವಲಯದ ಬ್ಯಾಂಕ್ ನ ಮುಖ್ಯ ಸ್ಥರಾದ ಗಾಯತ್ರಿ ಆರ್ ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾದ ಮುಖ್ಯ ಪ್ರಬಂಧಕ ಸತೀಶ್ ಪಾಠ್ಕರ್ ,ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ವಿಜಯ ಕುಮಾರ್ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್,ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಗಾಯತ್ರಿ ಎನ್ ಮನಪಾ ಅಭಿಯಂತರ ಅಶ್ವಿನ್,ಇಂಡಿಯನ್ ರೆಡ್ ಕ್ರಾಸ್ ಘಟಕದ ಹಿರಿಯ ಸದಸ್ಯ ರವೀಂದ್ರನಾಥ ಉಚ್ಚಿಲ್ ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ಮಂಗಳೂರು ವಿ.ವಿ.ಕಾಲೇಜು, ಬೆಸೆಂಟ್ ,ಗೋಕರ್ಣ ನಾಥ ಮತ್ತು ರಾಮಕೃಷ್ಣ ,ರೋಶನಿ ನಿಲಯ ಕಾಲೇಜುಗಳ ಯುವ ರೆಡ್ ಕ್ರಾಸ್‌ ಘಟಕದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments