HomeFresh Newsಮುಗ್ರೋಡಿ ಪ್ರದೇಶದಲ್ಲಿ ಮಳೆನೀರು ಹರಿದು ಹೋಗಲು ತೋಡು ನಿರ್ಮಾಣ:ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿ...

ಮುಗ್ರೋಡಿ ಪ್ರದೇಶದಲ್ಲಿ ಮಳೆನೀರು ಹರಿದು ಹೋಗಲು ತೋಡು ನಿರ್ಮಾಣ:ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ

ಪಚ್ಚನಾಡಿ ವಾರ್ಡ್‌ನ ಮುಗ್ರೋಡಿ ಪ್ರದೇಶದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಮಳೆನೀರು ಹರಿದು ಹೋಗುವ ತೋಡು ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಕಾಮಗಾರಿ ಸ್ಥಳಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯರ ಮನವಿಯನ್ನು ಆಲಿಸಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲ ಇರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೂ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಕಾರ್ಪೋರೇಟರ್ ಸಂಗೀತಾ ಆರ್. ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೋಂದೆಲ್ ಹಾಗೂ ಸ್ಥಳೀಯರಾದ ರಾಮ ಮುಗ್ರೋಡಿ, ರವೀಂದ್ರ ನಾಯಕ್,ರಘು ಮೊಯಿಲಿ, ರಾಜೇಶ್, ಮಹಾನಗರ ಪಾಲಿಕೆ ಅಧಿಕಾರಿಗಳು,ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments