ಕುಕ್ಕರ್ ಸ್ಫೋಟ ಮೈಸೂರು, ಮಂಗಳೂರಿನಲ್ಲಿ ನಾಲ್ವರು ವಶಕ್ಕೆ

ನಗರದ ನಾಗುರಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಎಂದು ಎಡಿಜಿಪಿ ಅಲೋಕ್ ಕುಮಾರ್ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೆÇೀನ್ ಹಾಗೂ ಕುಟುಂಬದವರು ಆತ ಶಾರಿಕ್ ಎಂದು ಗುರುತಿಸಿರುವುದಾಗಿ ಎಡಿಜಿಪಿ ತಿಳಿಸಿದ್ದಾರೆ. ಈತನ ಮೇಲೆ ಮಂಗಳೂರಿನ ಪೂರ್ವ ಮತ್ತು ಉತ್ತರ ಪೆÇಲೀಸ್ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣದಲ್ಲಿ ದಸ್ತಗಿರಿಯಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾರಿಕ್ ಅಲ್ಲಿಂದ ತಲೆಮರೆಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದನು. ನ.19ರಂದು ಮೈಸೂರಿನಿಂದ ಹೊರಟಿದ್ದ ಶಾರಿಕ್ ಹೂಣಸೂರು, ಮಡಿಕೇರಿ, ಮತ್ತೂರು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ಆಗಮಿಸಿ ನಗರ ಹೊರವಲಯದಲ್ಲಿ ಬಸ್ಸಿನಿಂದ ಇಳಿದು ನಂತರ ಆಟೋದಲ್ಲಿ ಪಂಪವೆಲ್ ಕಡೆಗೆ ಹೋಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಆರೋಪಿ ವಾಸವಿದ್ದ ಬಾಡಿಗೆ ಮನೆಯಿಂದ ಸಲ್ಫೆಕ್ಸ್ ಸಲ್ಫರ್ ಪೌಡರ್, ನಟ್ ಬೋಲ್ಡ್‍ಗಳು, ಸರ್ಕ್ಯೂಟ್‍ಗಳು, ಮಲ್ಟಿ ಫಂಕ್ಷನ್ ಡಿಲೆ ಟೈಮರ್, ಗ್ರೈಂಡರ್, ಮಿಕ್ಸರ್, ಮ್ಯಾಚ್ ಬಾಕ್ಸ್, ಬ್ಯಾಟರಿ, ಮೈಕ್ಯಾನಿಕಲ್ ಟೈಮರ್, ಆಧಾರ್ ಕಾರ್ಡ್, ಅಲ್ಯೂಮಿನಿಯಂ ಫೈಲ್ ಸಿಮ್ ಕಾರ್ಡ್‍ಗಳು, ಮೊಬೈಲ್‍ನ ಡಿಸ್‍ಪ್ಲೆಗಳು, ಸ್ಫೋಟಕಕ್ಕೆ ಬಳಸುವ ವಿವಿಧ ಬಗೆಯ ಕೆಮಿಕಲ್ಸ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ.

ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದವರು ಹೇಳಿದರು.

Related Posts

Leave a Reply

Your email address will not be published.