ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆ ಕಾಂಕ್ರಿಟೀಕರಣಕ್ಕೆ CPIM ಒತ್ತಾಯ

ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯ ಮುಖ್ಯರಸ್ತೆಯಿಂದ ಹಿಡಿದು ಒಳರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಮೇಲು ಕೀಳಾಟದಲ್ಲಿ ಸ್ಥಳೀಯ ನಿವಾಸಿಗಳು ದಿನನಿತ್ಯ ಸಮಸ್ಯೆಯನ್ನು ಅನುಭವಿಸುವಂತಾಗಿದೆ . ಆದ್ದರಿಂದ ಪಾಲಿಕೆ ಆಡಳಿತ ಈ ಕೂಡಲೇ ಸಂಪೂರ್ಣವಾಗಿ ಹದಗೆಟ್ಟ ಜಲ್ಲಿಗುಡ್ಡೆ ಜಯನಗರದ ರಸ್ತೆಯನ್ನು ಕಾಂಕ್ರಟೀಕರಣಗೊಳಿಸಬೇಕೆಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಹಾಗೂ ಬಜಾಲ್ ಜಲ್ಲಿಗುಡ್ಡೆ ಸಮಿತಿ ಒತ್ತಾಯಿಸಿದೆ.

ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ಈ ಬಗ್ಗೆ ಊರ ನಾಗರೀಕರು ಹಲವಾರು ಬಾರಿ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಈ ರಸ್ತೆಯನ್ನು ದುರಸ್ಥಿಗೊಳಿಸಲು ಸಾಧ್ಯವಾಗಿಲ್ಲ. ಈ ರಸ್ತೆಯ ಅಭಿವೃದ್ದಿ ಕೆಲಸಗಳಿಗೆ ಶಾಸಕ ವೇದವ್ಯಾಸ ಕಾಮತರ ಹಿಂಬಾಲಕರು ಅಡ್ಡಿ ಪಡಿಸುತ್ತಿರುವ ಆರೋಪಗಳು ಬಲವಾಗಿ ಕೇಳಿ ಬರುತ್ತಿದೆ. ಶಾಸಕರ ವ್ಯಕ್ತಿ ಪ್ರತಿಷ್ಟೆಗಾಗಿ ಅಭಿವೃದ್ದಿ ಕಾಮಗಾರಿಗಳಿಗೆ ಅಡ್ಡಿಪಡಿಸಿದ ಕಾರಣ ಒಂದು ಊರನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಸ್ಥಳೀಯ ನಿವಾಸಿಗಳ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಮಾತ್ರವಲ್ಲ ಜನ ನಡೆದಾಡದ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಪಕ್ಷದ ಆಡಳಿತದ ಅವಧಿಯಲ್ಲಿ ಬಜಾಲ್ ಪರಿಸರದ ಅಭಿವೃದ್ದಿಗೆ ಯಾವುದೇ ಗಮನವನ್ನು ನೀಡದ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಈಗ ತಮ್ಮ ಹಿಂಬಾಲಕರ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೂ ಅಡ್ಡಿ ಪಡಿಸುವ ಮೂಲಕ ಜನವಿರೋಧಿಯಾಗಿ ವರ್ತಿಸುತ್ತಿದ್ದಾರೆ‌. ಪಾಲಿಕೆ ಆಡಳಿತ ಈ ಕೂಡಲೇ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಜಯನಗರದ ಹದಗೆಟ್ಟ ರಸ್ತೆಯನ್ನು ಕಾಂಕ್ರಟೀಕರಣಗೊಳಿಸಲು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಹಾಗೂ ಬಜಾಲ್ ಜಲ್ಲಿಗುಡ್ಡೆ ಸಮಿತಿ ಒತ್ತಾಯಿಸಿದೆ ಎಂದು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್, ಜಲ್ಲಿಗುಡ್ಡೆ ಸಮಿತಿ ಕಾರ್ಯದರ್ಶಿ ರೋಹಿಣಿ ಜಲ್ಲಿಗುಡ್ಡೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Posts

Leave a Reply

Your email address will not be published.