ನಟ ರಿಷಬ್​ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಪಂಚೆಯಲ್ಲಿ ಮಿಂಚಿದ ನಟ

ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಟ ರಿಷಬ್​ ಶೆಟ್ಟಿ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪ್ರಶಸ್ತಿಯನ್ನು ಅವರು ದೈವ ನರ್ತಕರು, ನಮ್ಮನ್ನು ಅಗಲಿದ ಪುನೀತ್ ರಾಜ್​ಕುಮಾರ್ ಹಾಗೂ ಎಸ್​​.ಕೆ ಭಗವಾನ್ ಅವರಿಗೆ ಅರ್ಪಿಸುವುದಾಗಿ ಹೇಳಿದ್ದಾರೆ.

Related Posts

Leave a Reply

Your email address will not be published.