ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ. ಸಂಸ್ಥೆಯಿಂದ ಮಂಜುನಾಥ ಖಾರ್ವಿ ಮೀನು ಖರೀದಿ ಮಾಡಿದ್ದರು. ಅಲ್ಲದೆ ಫೆಡರೇಷನ್‌ಗೆ ಮೀನು ಮಾರಾಟವಾದ ಕಮಿಷನ್‌ ಕೂಡ ಬಾಕಿ ಇರಿಸಿದ್ದರು. ಈ ಮೊತ್ತಕ್ಕೆ ಮೂರು ಚೆಕ್‌ಗಳನ್ನು ಫೆಡರೇಷನ್‌ಗೆ ನೀಡಿದ್ದರು. ಆ ಚೆಕ್‌ಗಳನ್ನು ಬ್ಯಾಂಕ್‌ಗೆ ನೀಡಿದಾಗ ಖಾತೆಯಲ್ಲಿ ಹಣವಿಲ್ಲದೆ ಅಮಾನತುಗೊಂಡಿದ್ದವು. ಇದಕ್ಕೆ ಸಂಬಂಧಿಸಿದ ನೋಟಿಸ್‌ ನೀಡದರೂ ಬಾಕಿ ಮೊತ್ತ ನೀಡಿರಲಿಲ್ಲ. ಈ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಾಗಿತ್ತು. ಅವರ ಮೇಲೆ ಮೂರು ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯ ಮೂರು ಪ್ರಕರಣಗಳಲ್ಲಿ ಆರೋಪಿ 5 ಲ.ರೂ., 53 ಲ.ರೂ. ಮತ್ತು 30 ಲ.ರೂ. ಸೇರಿದಂತೆ ಒಟ್ಟು 88 ಲ.ರೂ. ಪಾವತಿಸಬೇಕು ಎಂದು ಈ ಹಿಂದೆ ತೀರ್ಪು ನೀಡಿತ್ತು. ದೂರುದಾರರ ಪರ ವೆರಿಟಾಸ್‌ ಲೆಗೀಸ್‌ ಅಸೋಸಿಯೇಷನ್‌ ಮಂಗಳೂರಿನ ವಕೀಲರಾದ ರಾಘವೇಂದ್ರ ರಾವ್‌, ಗೌರಿ ಶೆಣೈ ವಾದಿಸಿದ್ದರು.

Related Posts

Leave a Reply

Your email address will not be published.