HomeFresh Newsದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವೆಬ್ ಸೈಟ್ ಅನಾವರಣ

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವೆಬ್ ಸೈಟ್ ಅನಾವರಣ

ಮಂಗಳೂರು: ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ನನ್ನಿಂದಾಗುವ ಸಹಾಯ ಮಾಡಿದ್ದೇನೆ ಎಂಬ ಆತ್ಮ ತೃಪ್ತಿ ನನಗಿದೆ.ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂಬ ಮಾತಿನಂತೆ ನಾನು ಕಾರ್ಯ ನಿರ್ವಹಿಸುತ್ತಾ ಬಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾ ಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ದ ವೆಬ್ ಸೈಟ್(dkwju.com) ಅನಾವರಣಗೊಳಿಸಿ ಅವರು ಮಾತನಾಡಿದರು.
,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗಿ ಕನ್ನಡದ ಕೆಲಸ ಮಾಡಿರುವುದರ ಜತೆಗೆ ಮನೆಯಿಲ್ಲದವರಿಗೆ ಸರ್ಕಾರದ ನೆರವಿನಿಂದ ಮನೆ ನಿರ್ಮಿಸಲು ಸಹಾಯ ಮಾಡಿದ್ದೇನೆ . ಸೂರಿಲ್ಲದ ವರಿಗೆ 101 ಮನೆಯನ್ನು ನಾನೇ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದೇನೆ, ಖ್ಯಾತ ನೇತ್ರ ತಜ್ಞ ಡಾ.ಮೋದಿಯವರ ಮೂಲಕ ಉಚಿತ ಕಣ್ಣಿನ ತಪಾಸಣೆ ಶಿಬಿರಗಳನ್ನು ನಡೆಸಿ 10 ಸಾವಿರಕ್ಕೂ ಅಧಿಕ ಮಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆಮ ಸಮಾಜ ಸೇವಾ ಚಟುವಟಿಕೆ ಗಳಲ್ಲಿ ತೊಡಗಿಕೊಳ್ಳಲು ನನ್ನ ಪತ್ನಿಯ ಸಹಕಾರವು ದೊರೆತಿದೆ, ದೇವರು ಆರೋಗ್ಯ ನೀಡಿದ್ದಾರೆ. ಆರೋಗ್ಯ ಚೆನ್ನಾಗಿರುವವರೆಗೆ ಈ ರೀತಿಯ ಚಟುವಟಿ ಕೆಗಳನ್ನು ನಡೆಸುವ ಇಚ್ಛೆ ಇದೆ.ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘಕ್ಕೆ ಈಗಾಗಲೇ ನೀಡಿದ ಭರವಸೆಯಂತೆ ಸಹಕಾರ ನೀಡುವುದಾಗಿ ತಿಳಿಸಿದರು.
ದ.ಕ. ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್‌ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ.ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಕೋಶಾಧಿಕಾರಿ ವಿಜಯ ಕೋಟ್ಯಾನ್ ಪಡು ಮತ್ತು ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಕೆ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments