ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಆ.21 ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟು ಮಾಡುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

“Sanjeeva Matandoor” ಫೇಸ್ಬುಕ್ ಖಾತೆ ಹೊಂದಿರುವ ವ್ಯಕ್ತಿಯು ಬಂದ್‌ಗೆ ಕರೆ ಕೊಟ್ಟು, ಜನರು ಅಕ್ರಮವಾಗಿ ಸೇರಿ ಕಾನೂನುಬಾಹಿರ ಕೃತ್ಯ ಎಸಗಲು ಪ್ರೇರಣೆ ನೀಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ. ಕ್ರ, 102/2026, 0 353(2), 57, 189 BNS 2023 3 ನಡೆಸಲಾಗುತ್ತಿದೆ.ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದ್ದು, ಪೊಲೀಸ್ ಇಲಾಖೆ ಅನುಮತಿ ನೀಡಲಿದೆ. ಆದರೆ ಪ್ರತಿಭಟನೆಯ ದಿನಾಂಕ ಮತ್ತು ಸಮಯವನ್ನು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಯಾವುದೇ ಅನ್ಯ ಉದ್ದೇಶದಿಂದ ನಿಗದಿಪಡಿಸಿರುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



