ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್​​ಡೆವಿಲ್​ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ.

ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ರಾಜ್ಯದಲ್ಲಿ ನೀಡಲಾಗಿದೆ. ಧರ್ಮ ಸಹಿಷ್ಣುತೆ, ಸಹಬಾಳ್ವೆ, ಸಮಭಾವದ ಪಾಠ ಹೇಳುವ ‘ಡೇರ್​​ಡೆವಿಲ್​ ಮುಸ್ತಫಾ’ ಸಿನಿಮಾವನ್ನು ಹೆಚ್ಚಿನ ಮಂದಿಗೆ ತೋರಿಸುವ ಇಚ್ಛೆಯಿಂದ ಸಿಎಂ ಬಳಿ ಚಿತ್ರತಂಡ ತೆರಿಗೆ ವಿನಾಯಿತಿಗೆ ಮನವಿ ಮಾಡಿತ್ತು.

ಶಶಾಂಕ್​ ಸೋಗಾಲ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್,ಪ್ರೇರಣಾ ಅವರು ಸಿನಿಮಾದಲ್ಲಿ ನಟಿಸಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ಸಿನಿಮಾ ನೋಡಲು ಅನುಕೂಲವಾಗುವಂತೆ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ

Related Posts

Leave a Reply

Your email address will not be published.