ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕರು ಮನವಿ

ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾದ‌ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಶಾಸಕರು ಮನವಿ ಮಾಡಿದ್ದೇನೆ. ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಹಬ್ಬಕ್ಕೆ ಪೂರಕವಾಗಿ ರಜೆ ನೀಡಲು ಮನವಿ ಮಾಡಿದ್ದೇನೆ. ಸಚಿವರು ಕೂಡ ಪೂರಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ.

ಅಕ್ಟೋಬರ್ 2ನೇ ತಾರೀಕು ಗಾಂಧಿ ಜಯಂತಿಯ ಕಾರಣ ಆ ದಿನ ಹೊರತುಪಡಿಸಿ ದಸರಾ ರಜೆ ನೀಡಲು ಚಿಂತನೆ ನಡೆಸಿರುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published.