ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದ ಯತೀಶ್ ಪೆರುವಾಯಿ ಗಡಿಪಾರು ನೋಟೀಸ್ ಪಡೆದ ಹಿಂದೂ ಕಾರ್ಯಕರ್ತನಾಗಿದ್ದು, ಈತನನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ವಿಟ್ಲ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಜಿಲ್ಲಾ ಎಸ್ಪಿ ಅರುಣ್.ಕೆ ಅವರಿಗೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಪೆರುವಾಯಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತನಿಗೆ ನೋಟೀಸ್ ಜಾರಿ ಮಾಡಿರೋದನ್ನ ವಿರೋಧಿಸಿ ಬಿಜೆಪಿ ಪ್ರತಿಭಟನೆಯ ಎಚ್ಚರಿಕೆ ನೀಡಿದೆ. ಪೆರುವಾಯಿ ಗ್ರಾಮಪಂಚಾಯತ್ ಅಧ್ಯಕ್ಷೆಯ ವಿರುದ್ಧ ಭ್ರಷ್ಟಾಚಾರದ ದೂರು ನೀಡಿ ಆಕೆಯನ್ನು ಜೈಲಿಗೆ ಅಟ್ಟುವ ಕೆಲಸವನ್ನು ಯತೀಶ್ ಮಾಡಿದ್ದು, ಇದೇ ಕಾರಣಕ್ಕೆ ದ್ವೇಷದ ಹಿನ್ನಲೆಯಲ್ಲಿ ಈ ಗಡಿಪಾರು ನೋಟೀಸ್ ಜಾರಿ ಮಾಡಿದ್ದು, ಗಡಿಪಾರು ಆದೇಶವನ್ನು ಹಿಂಪಡೆಯದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ಬಿಜೆಪಿ ಪಕ್ಷ ನೀಡಿದೆ.


