ಬೆಳ್ಳಣ್ಣು, ಆ. 7: ದೇವಾಡಿಗ ಸಮಾಜ ಸೇವಾ ಸಂಘ (ರಿ.) ಬೆಳ್ಳಣ್ಣು ವಲಯ, ಮಹಿಳಾ ಸಂಘಟನೆ ಹಾಗೂ ಯುವ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಆಗಸ್ಟ್ 9, ಭಾನುವಾರ ಬೆಳಿಗ್ಗೆ 9.30ಕ್ಕೆ ದೇವಾಡಿಗ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ. ಆಟಿ ತಿಂಗಳ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ, ರುಚಿ ಪರಿಚಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾಜದ ಸದಸ್ಯರು ತಮ್ಮ ಮನೆಗಳಲ್ಲಿ ತಯಾರಿಸುವ ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ಪ್ರದರ್ಶನಕ್ಕೆ ತಂದು, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಉಷಾ ವಿರಲ್ ದೇವಾಡಿಗ ವಹಿಸಲಿದ್ದು, ರಾಜ್ಯ ಪ್ರಶಸ್ತಿ ವಿಜೇತ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಮೊಯಿಲಿ, ಶ್ರೀ ರವಿಶಂಕರ್ ಶೇರಿಗಾರ, ದೇವಾಡಿಗ ಸಮಾಜ ಸೇವಾ ಸಂಘ ಉಡುಪಿ ಅಧ್ಯಕ್ಷರಾದ ಶ್ರೀ ರತ್ನಾಕರ ದೇವಾಡಿಗ, ಶ್ರೀಮತಿ ಶಾಂತಿ ವಸಂತ್ ಕುಮಾರ್, ಶ್ರೀ ಎನ್.ಕೆ. ಶ್ರೀಧರ್ ದೇವಾಡಿಗ, ಶ್ರೀಮತಿ ಶುಭ ಗಣೇಶ್ ದೇವಾಡಿಗ, ಶ್ರೀ ಸುನಿಲ್ ದೇವಾಡಿಗ ಹಾಗೂ ಶ್ರೀ ವಸಂತ ದೇವಾಡಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ಜಯರಾಮ ದೇವಾಡಿಗ (ಬೋಳ–ವಂಜಾರಕಟ್ಟೆ) ಹಾಗೂ ಝೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಶ್ರೀ ಸಂದೀಪ್ ದೇವಾಡಿಗ ಅವರನ್ನು ಸನ್ಮಾನಿಸಲಾಗುವುದು. ಮಹಿಳಾ ವಿಭಾಗದ ಕೋಶಾಧಿಕಾರಿ ಶ್ರೀಮತಿ ಜ್ಯೋತಿ ಶ್ರೀಧರ್ ದೇವಾಡಿಗ, ಯುವ ವಿಭಾಗದ ಅಧ್ಯಕ್ಷ ಶ್ರೀ ಯೋಗೀಶ್ ದೇವಾಡಿಗ, ಮಹಿಳಾ ವಿಭಾಗದ ಕಾರ್ಯದರ್ಶಿ ಶ್ರೀಮತಿ ಮೋಹಿನಿ ಅನಿಲ್ ದೇವಾಡಿಗ, ಯುವ ವಿಭಾಗದ ಕಾರ್ಯದರ್ಶಿ ಶ್ರೀ ಲೋಹಿತ್ ದೇವಾಡಿಗ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆ ನಡೆಸಿದ್ದಾರೆ. ದೇವಾಡಿಗ ಸಮಾಜದ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.


