ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಹೆಚ್‌ ಡಿಕೆ ಭೇಟಿ 

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು.

ಶನಿವಾರ ಸಂಜೆ ಅವರು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ದುರ್ಗಾ ಪೂಜೆ ಸಲ್ಲಿಸಿದರು. ಧಾರ್ಮಿಕ ಹೋಮ ಹವನ ನಡೆದು ಅದರ ಪೂರ್ಣಾಹುತಿಯಲ್ಲಿ ಅವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು, ವಿಧಾನ ಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ರಾಜ್ಯ ವಕ್ತಾರ ಹಾಗೂ ಮಾದ್ಯಮ ಸಂಚಾಲಕ ಎಂ.ಬಿ.ಸದಾಶಿವ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ತಾಲೂಕು ನಿಯೋಜಿತ ಅಧ್ಯಕ್ಷ ಶ್ರೀನಿವಾಸ ಗೌಡ ಪಟ್ರಮೆ, ಪ್ರಮುಖರಾದ ಎಚ್.ಎನ್. ನಾಗರಾಜ್, ರಾಮ ಆಚಾರಿ, ಶಾಹಿದ್ ಪಾದೆ ಉಪಸ್ಥಿತರಿದ್ದರು.

Related Posts

Leave a Reply

Your email address will not be published.