HomeFresh Newsಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ

ಭಾರತ ತಂಡದ ಕ್ರಿಕೆಟಿಗ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ರಾಹುಲ್‌ಗೆ ಹೆಗ್ಗಡೆಯವರು ಶಾಲು ಹೊದಿಸಿ ಬೆಳ್ಳಿಯ ನಾಣ್ಯ, ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು. ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.

ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments