ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು. ಕೊರಗಜ್ಜನ ಕ್ಷೇತ್ರವು ಪ್ರಾಕೃತಿಕ ಸೌಂದರ್ಯವನ್ನೊಳಗೊಂಡಿದ್ದು, ತುಂಬಾ ಚೆನ್ನಾಗಿದೆ.ಮುಂದಿನ ಜೂನ್ ತಿಂಗಳಲ್ಲಿ ತೆರೆ ಕಾಣಲಿರುವ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ಯಶಸ್ಸು ಕಾಣಲಿ ಎಂದು ಕೊರಗಜ್ಜನಲ್ಲಿ ಪ್ರಾರ್ಥಿಸಿದೆ ಎಂದು ರಚಿತಾರಾಮ್ ಹೇಳಿದರು.

ಕೊರಗಜ್ಜನ ಆದಿ ಕ್ಷೇತ್ರದ ವತಿಯಿಂದ ರಚಿತಾ ರಾಮ್ ಅವರನ್ನ ಶಾಲು ಹೊದಿಸಿ ಅಭಿನಂದಿಸಲಾಯಿತು. ಎ.ಜೆ ಆಸ್ಪತ್ರೆ ಮುಖ್ಯಸ್ಥರಾದ ಡಾ. ಪ್ರಶಾಂತ್ ಶೆಟ್ಟಿ ಮಾರ್ಲ, ಆಶ್ರಿತಾ ಶೆಟ್ಟಿ, ಹೊಟೇಲ್ ಫುಡ್ ಲ್ಯಾಂಡ್ಸ್ ಮಾಲೀಕ ಆಶೀಶ್ ಶೆಟ್ಟಿ,ಮಾಗಣ್ತಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಜಯರಾಮ್ ಭಂಡಾರಿ ,ಟ್ರಸ್ಟಿಗಳಾದ ಮಹಾಬಲ್ ಹೆಗ್ಡೆ ,ಪ್ರೀತಮ್ ಶೆಟ್ಟಿ,ಮಾಗಣ್ತಡಿ ಕುಟುಂಬದ ಜಗನ್ನಾಥ್ ಶೆಟ್ಟಿ, ಸ್ವಾತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.