ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೂ ದಂತ ಸಂರಕ್ಷಣಾ ಸಲಕರಣೆ ಮತ್ತು ಕ್ರೇಯನ್ಸನ್ನು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರೋಗ್ಯ ಭಾರತಿಯ ಜಿಲ್ಲಾ ಜೊತೆ ಕಾರ್ಯದರ್ಶಿಗಳಾದ ದಿನೇಶ್ ಚಂದ್ರಗಿರಿ ಅವರು ಮಕ್ಕಳಿಗೆ ನೀತಿಕಥೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಇಂದಿರಾ ಡಿ. ಹಾಗೂ ಶಿಕ್ಷಕಿ ಶ್ರೀಮತಿ ಜಾನೆಟ್ ಡಿ. ಮೆಲ್ಲೋ ಉಪಸ್ಥಿತರಿದ್ದರು.
ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೂ ದಂತ ಸಂರಕ್ಷಣಾ ಸಲಕರಣೆ ಮತ್ತು ಕ್ರೇಯನ್ಸ ವಿತರಣೆ
RELATED ARTICLES
