ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು
ಕಾರ್ಯದರ್ಶಿ ಹೇಮ ವೇಣುಗೋಪಾಲ್, ಕೋಶಾಧಿಕಾರಿ ಚಂದ್ರಾಕ್ಷಿ ಜೆ.ರೈ, ನಿರ್ದೇಶಕರಾದ ಜಲಜಾಕ್ಷಿ ಎಂ.ಶೆಟ್ಟಿ, ಚಂದ್ರಾವತಿ ಬದಿಕಾನ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಹೆರಿಗೆ ತಜ್ಞೆ ಡಾ.ಶಾಲಿನಿ, ಇಎನ್‌ಟಿ ತಜ್ಞೆ ಡಾ.ಸೌಮ್ಯ, ನರ್ಸಿಂಗ್ ಸೋಪರಿಂಡೆಂಟ್ ಕಮಲಾಕ್ಷಿ ಡಿ, ಶುಸ್ರೂಸಕಿ ಅಧಿಕಾರಿ ಹರಿಣಾಕ್ಷಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.