ಪಡುಬಿದ್ರಿ: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪಡುಬಿದ್ರಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ನ.16ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಪಡುಬಿದ್ರಿಯ ಪ್ರಾಂಶುಪಾಲರಾದ ಡಾ. ಸುಮ್ಮಾ ಎಸ್. ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಾದ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ನಾಮನಿರ್ದೇಶಕ ಹೇಮಚಂದ್ರ ಸಾಲ್ಯಾನ್, ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಸರಿತಾ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಜಾ, ಸೊಸೈಟಿಯ ನಿರ್ದೇಶಕರಾದ ವೈ.ಜಿ. ರಸೂಲ್, ರಾಜಾರಾಮ್ ರಾವ್, ವಾಸುದೇವ ದೇವಾಡಿಗ, ಹಸನ್ ಬಾವಾ, ಕೃಷ್ಣ ಬಂಗೇರ, ರೋಹಿಣಿ ಆನಂದ್ ಉಪಸ್ಥಿತರಿದ್ದರು.
ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್., ಸಹಾಯಕ ಕಾರ್ಯನಿರ್ವಹಣಾಧಿಕಾರಿ ದೀಪಕ್ ಸಾಲ್ಯಾನ್ ಸೇರಿದಂತೆ ಶಾಲಾ ಹಾಗೂ ಕಾಲೇಜುಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಹಕಾರ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಸೃಜನಶೀಲತೆ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


