HomeFresh Newsಶ್ವೇತಾ ಪ್ರಸನ್ನ ಶೆಟ್ಟಿ ಅವರಿಗೆ ಡಾಕ್ಟರೇಟ್ ಪದವಿ

ಶ್ವೇತಾ ಪ್ರಸನ್ನ ಶೆಟ್ಟಿ ಅವರಿಗೆ ಡಾಕ್ಟರೇಟ್ ಪದವಿ

ಎರ್ಮಾಳು: ಗಣಿತಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿರುವ ಶ್ವೇತಾ ಪ್ರಸನ್ನ ಶೆಟ್ಟಿ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿಯ 26ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಹಾಗೂ ವಿಭಾಗ ಮುಖ್ಯಸ್ಥೆಯಾಗಿದ್ದ ಡಾ. ಶಾಂತಕುಮಾರಿ ಕೆ. ಅವರ ಮಾರ್ಗದರ್ಶನದಲ್ಲಿ ಶ್ವೇತಾ ಪ್ರಸನ್ನ ಶೆಟ್ಟಿ ಅವರು “A Study of Single and Double Integrals Involving Hypergeometric and Generalized Hypergeometric Functions with Applications” ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು.
ಮಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸುಮಾರು ಏಳು ವರ್ಷಗಳ ಕಾಲ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿರುವ ಶ್ವೇತಾ ಅವರ ಸಂಶೋಧನಾ ಪ್ರಬಂಧಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಗಣಿತಶಾಸ್ತ್ರದ ಜರ್ನಲ್‌ಗಳಲ್ಲಿ ಪ್ರಕಟಗೊಂಡಿವೆ.
ಶ್ವೇತಾ ಪ್ರಸನ್ನ ಶೆಟ್ಟಿ ಅವರು ಎರ್ಮಾಳು ಪುಚೊಟ್ಟು ದಿ. ಸುಂದರ್ ಶೆಟ್ಟಿ ಹಾಗೂ ಪಾದೂರು ಕರ್ಮರಪಾಡಿ ವತ್ಸಲಾ ಶೆಟ್ಟಿ ದಂಪತಿಯ ಪುತ್ರಿ. ಪುಣೆಯ ಉದ್ಯಮಿ ಪ್ರಸನ್ನ ಶೆಟ್ಟಿ ಪೆರ್ಡೂರು ಅವರ ಪತ್ನಿಯಾಗಿರುವ ಶ್ವೇತಾ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿರುವುದು ಕುಟುಂಬಸ್ಥರು ಹಾಗೂ ಹಿತೈಷಿಗಳಲ್ಲಿ ಸಂತಸ ಮೂಡಿಸಿದೆ.
ಗಣಿತಶಾಸ್ತ್ರ ಕ್ಷೇತ್ರದಲ್ಲಿ ಶ್ವೇತಾ ಪ್ರಸನ್ನ ಶೆಟ್ಟಿ ಅವರ ಸಂಶೋಧನಾ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments