ಡಾ. ದುರ್ಗಾಪ್ರಸಾದ್ ಅವರಿಗೆ ವೈದ್ಯ ಶ್ರೇಷ್ಠ ಪ್ರಶಸ್ತಿ

ಮಂಗಳೂರಿನ ತೆಂಕ ಎಡಪದವಿನವರಾದ ಡಾ. ದುರ್ಗಾಪ್ರಸಾದ್ ಅವರಿಗೆ ಉತ್ತಮ ವೈದ್ಯಕೀಯ ಸೇವೆಗಾಗಿ ಶ್ರೇಷ್ಟ ವೈದ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಪ್ರದೇಶಗಳಾದ ಪೆರುವಾಯಿ ಮತ್ತು ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ 18 ವರ್ಷಗಳಲ್ಲಿ ದುಡಿದು ಸಮುದಾಯ ಆರೋಗ್ಯ ಕೇಂದ್ರ ವಾಮದಪದವನ್ನು ರಾಜ್ಯದಲ್ಲಿಯೇ ಮಾದರಿ ಆರೋಗ್ಯ ಕೇಂದ್ರವನ್ನಾಗಿ ರೂಪಿಸಿದ ಹಿರಿಮೆ ಇವರಿಗೆ ಸಲ್ಲಿತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಉದರದರ್ಶಕ ಸಂತಾನಹರಣ ಶಸ್ತ್ರಚಿಕಿತ್ಸಕನಾಗಿ ಇದುವರೆಗೆ ಸುಮಾರು 90 ಸಾವಿರ ಶಸ್ತ್ರಚಿಕಿತ್ಸೆಗಳನ್ನು ನಡೆಸಿಕೊಟ್ಟ ಸಾಧನೆ ಇವರದ್ದು, ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕನಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಲೇಖನಗಳು, ಆರೋಗ್ಯ ಕವನ ಸಂಕಲನ, ಅರೆ ವೈದ್ಯಕೀಯ ಸಿಬ್ಬಂದಿಗಳಿಗಾಗಿ ಅನೇಕ ಶಿಕ್ಷಣ ಮಾರ್ಗದರ್ಶಿ ಪುಸ್ತಕಗಳನ್ನು ರಚಿಸಿದ್ದಾರೆ.

Related Posts

Leave a Reply

Your email address will not be published.