ಮೂಡುಬಿದಿರೆಯ ಕೃಷಿ ತಜ್ಞ ಡಾ.ಎಲ್.ಸಿ ಸೋನ್ಸ್ ಅಸ್ತಂಗತ

ಮೂಡುಬಿದಿರೆ: ಕೃಷಿ ತಜ್ಞ, ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್‍ನ ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್ ಅವರು ಇಂದು (ಬುಧವಾರ) ಬೆಳಿಗ್ಗೆ ಅಸ್ತಂಗತರಾದರು.ಕೃಷಿ ಋಷಿ: 1934 ಏಪ್ರಿಲ್ 4ರಂದು ಜನಿಸಿರುವ ಡಾ.ಎಲ್.ಸಿ ಸೋನ್ಸ್ ತನ್ನ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು. ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಬೇಧ, ದೇಶ-ವಿದೇಶಗಳ ಹಣ್ಣು-ತರಕಾರಿ ಪ್ರಬೇಧಗಳನ್ನು ಮೂಡುಬಿದಿರೆ ಬನ್ನಡ್ಕದ ಮಣ್ಣಿನಲ್ಲಿ ಬೆಳೆಸಿ, ಅದರಿಂದ ಫಸಲು ಹಾಗೂ ಲಾಭಗಳಿಸಿದವರಾಗಿದ್ದಾರೆ. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿಯನ್ನು ಹೊಂದಿದ್ದರು.

ಸಮಾಜಮುಖಿ ವ್ಯಕ್ತಿತ್ವ: ಕೃಷಿಯ ಜೊತೆಗೆ ಸಾಮಾಜಿಕವಾಗಿಯು ಗುರುತಿಸಿಕೊಂಡಿರುವ ಸೋನ್ಸ್ ಅವರು ಹಲವಾರು ಸಂಘಸಂಸ್ಥೆಗಳ ಸಕ್ರಿಯ ಪದಾಧಿಕಾರಿ. ಅಮೇರಿಕನ್ ಸೊಸೈಟಿ ಆಫ್ ಡೌಸರ್ ಸದಸ್ಯ, ಬ್ರಿಟಿಸ್ ಸೊಸೈಟಿ ಆಫ್ ಡೌಸರ್ ಅಜೀವ ಸದಸ್ಯರಾಗಿದ್ದಾರೆ. ಮೂಡುಬಿದಿರೆ ಕಡಲಕೆರೆ ನಿಸರ್ಗಧಾಮದ ಸಲಹೆಗಾರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶ್ರೀಮಹಾವೀರ ವಿಧ್ಯಾವರ್ಧಕ ಸಂಘ, ಶ್ರೀಮಹಾವೀರ ಕಾಲೇಜು ಆಡಳಿತ ಮಂಡಳಿ ಸದಸ್ಯರಾಗಿ, ರೋಟರಿ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದಾರೆ. ಸಮಾಜಮಂದಿರ ಸಭಾದ ಮಾಜಿ ಅಧ್ಯಕ್ಷರಾಗಿ ಪ್ರಸ್ತುತ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಕೃಷಿ ವಿಚಾರ ವಿನಿಮಯ ಕೇಂದ್ರದಲ್ಲೂ ಪದಾಧಿಕಾರುಯಾಗಿ ಸೇವೆ ಸಲ್ಲಿಸಿದ್ದಾರೆ.ಕೃಷಿ ಮತ್ತು ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಅಲ್ಫ್ರೇಡ್ ಸೋನ್ಸ್ ಫೌಂಡೇಶನ್ ಸ್ಥಾಪಿಸಿದ್ದಾರೆ.

ಗೌರವ: ಬೆಂಗಳೂರು ಕೃಷಿ ವಿ.ವಿಯಿಂದ ಉತ್ತಮ ತೋಟಗಾರಿಕಾ ಸಾಧಕ ಪ್ರಶಸ್ತಿ, ಅಮೇರಿಕ ಮೊಟಾನಾ ವಿ.ವಿಯಿಂದ ವಿಶೇಷ ಹಳೆ ವಿದ್ಯಾರ್ಥಿ ಪ್ರಶಸ್ತಿ ಪಡೆದಿದ್ದು, ಅಮೇರಿಕದ ಹಳೆ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಅನ್ಯ ದೇಶದಿಂದ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ ಸೋನ್ಸ್.
2006 ಸಾಧಕ ಪ್ರಶಸ್ತಿ, 2004 ದ.ಕ ಜಿಲ್ಲಾ ರಾಜೋತ್ಸವ, ಹಿರಿಯಡ್ಕದ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದಿಂದ ಬೆಸ್ಟ್ ಫಾರ್ಮರ್ ಪ್ರಶಸ್ತಿ, 2010-ಬಾಗಲಕೋಟೆ ತೋಟಗಾರಿಕಾ ವಿ.ವಿಯಿಂದ ರಾಷ್ಟ್ರಮಟ್ಟದ ಪ್ರಶಸ್ತಿ, ವಿಶ್ವ ತುಳು ಸಮ್ಮೇಳನ ಸನ್ಮಾನ ಸಹಿತ ದೇಶ ವಿದೇಶಗಳ ಹಲವಾರಯ ಸಂಘ ಸಂಸ್ಥೆಗಳು ಸೋನ್ಸ್ ಅವರ ಸಾಧನೆಯನ್ನು ಗೌರವಿಸಿದೆ. ಇಸ್ರೆಲ್‍ನಲ್ಲಿ ನಡೆದ ವಿಶ್ವ ನೀರಾವರಿ ಸಮ್ಮೇಳನಕ್ಕೆ ಭಾಗವಹಿಸಿ, ಅವುಗಳ ಮಾದರಿಯನ್ನು ತನ್ನೂರಿನಲ್ಲಿ ಪ್ರಯೋಗಿಸಿದ್ದಾರೆ.ನಿನ್ನೆ ತನ್ನ 89 ನೇ ವರ್ಷದ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡಿದ್ದರು.

Related Posts

Leave a Reply

Your email address will not be published.