ಕೆಆರ್‌ಎಂಎಸ್‌ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಮಾಧವ ಎಂ.ಕೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾನಿಲಯ ಶಿಕ್ಷಕ ಸಂಘ (KRMSS) ರಾಜ್ಯ ಘಟಕದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ ಆಯ್ಕೆಯಾಗಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ ಇತ್ತೀಚೆಗೆ ನಡೆದ ಕೆಆರ್‌ಎಂಎಸ್‌ಎಸ್ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ಆಯ್ಕೆ ನಡೆದಿದೆ. ಡಾ. ಮಾಧವ ಎಂ.ಕೆ ಅವರು ಪ್ರಸ್ತುತ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ, ಭಾರತೀಯ ಸಾಂಸ್ಕೃತಿಕ ಪರಿಷತ್‌ನ ಪ್ರಾದೇಶಿಕ ಸಲಹಾ ಮಂಡಳಿಯ ಸದಸ್ಯರಾಗಿ ಹಾಗೂ ನೂತನ ಶಿಕ್ಷಣ ನೀತಿಯಡಿ ರೂಪಿಸಲಾಗಿರುವ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣದ ಕನ್ನಡ ಪುಸ್ತಕಗಳ ತಜ್ಞರ ಸಮಿತಿ ಸದಸ್ಯರಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ.
ಉಳಿದಂತೆ ಕೆಆರ್‌ಎಂಎಸ್‌ಎಸ್ ಮಂಗಳೂರು ವಿಭಾಗದ ಅಧ್ಯಕ್ಷರಾಗಿ ವಿವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಸುಧಾ ಎನ್ ವೈದ್ಯ, ಕಾರ್ಯದರ್ಶಿಯಾಗಿ ಸಂಧ್ಯಾ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ವೆಂಕಟೇಶ ನಾಯಕ್, ಕೋಶಾಧಿಕಾರಿಯಾಗಿ ಕನ್ನಡ ಉಪನ್ಯಾಸಕಿ ಆಶಾಲತಾ ಅವರು ಆಯ್ಕೆಯಾಗಿದ್ದಾರೆ, ಎಂದು ಪ್ರಕಟಣೆ ತಿಳಿಸಿದೆ.