ಶಿವಮೊಗ್ಗ: ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಭರ್ಜರಿ ಪ್ರಚಾರ

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರು ಶಿವಮೊಗ್ಗದ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು.


ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಸೇವಾ ಮನೋಭಾವನೆಯುಳ್ಳ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ.

ಅವರು ಶಿವಮೊಗ್ಗದ ವಿವಿಧೆಡೆ ಶಾಲಾ ಕಾಲೇಜು, ಮೆಡಿಕಲ್ ಕಾಲೇಜುಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರ ಜೊತೆಗೆ ಚರ್ಚಿಸಿ, ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೇಳಿಕೊಂಡರು.