ಜೂನ್ 20ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು.

ಅವರು ಬಿ.ಸಿ.ರೋಡು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಗೆ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಚಾರ ಸಂಕಿರಣ ಉದ್ಘಾಟಿಸುವರು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸುವರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತವಿಕವಾಗಿ ಮಾತನಾಡುವರು. ಬಳಿಕ 10.45 ರಿಂದ 11.45 ರವರೆಗೆ ಸ್ವತ್ವಯುತ ಭಾರತ ಒಂದು ವಿವೇಚನೆ ಬಗ್ಗೆ ಪತ್ರಕರ್ತ ಅಜೀತ್ ಹನುಮಕ್ಕನವರು, 12 ರಿಂದ 1 ಗಂಟೆಯವರೆಗೆ ಭಾರತೀಯ ಅಭಿವೃದ್ಧಿ ಮಾದರಿಗಳು ವಿಚಾರದ ಬಗ್ಗೆ ಶಿವಮೊಗ್ಗದ ವಿಶ್ರಾಂತ ಪ್ರಾಚಾರ್ಯ ಪ್ರೊ. ಎಂ.ಬಿ. ಕುಮಾರಸ್ವಾಮಿ, 1.45 ರಿಂದ 2.45ರವರೆಗೆ ಆಡಳಿತ ಮತ್ತು ನಿರ್ವಹಣೆ ಭಾರತೀಯ ಮಾದರಿ ಬಗ್ಗೆ ನಿವೃತ್ತ ಸೇನಾಧಿಕಾರಿ ಕ್ಯಾ, ಬ್ರಿಜೇಶ್ ಚೌಟ, 3ರಿಂದ 4 ಗಂಟೆಯವರೆಗೆ ಸ್ವಾಮಿ ವಿವೇಕಾನಂದರ ಚಿಂತನೆಯ ಪ್ರಸ್ತುತತೆ ಕುರಿತು ಚಕ್ರವರ್ತಿ ಸೂಲಿಬೆಲೆ ವಿಚಾರ ಮಂಡಿಸುವರು ಎಂದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಪದವಿ ತರಗತಿಯ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರ್‍ಕಟ್ಟೆ ಉಪಸ್ಥಿತರಿದ್ದರು.

Related Posts

Leave a Reply

Your email address will not be published.