ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿ ಗುಂಡಿಗಳನ್ನು ಮುಚ್ಚಲು ಡಿವೈಎಫ್ಐ ಮನವಿ
ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇಂದು (19-7-2023) ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗವು ಮನವಿಯನ್ನು ಸಲ್ಲಿಸಿದೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ,ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್ಐ ಮುಖಂಡರಾದ ಉಸ್ಮಾನ್ ಕಣ್ಣೂರ್, ಆಸೀಫ್, ರಿಯಾಝ್ ಮುಂತಾದವರು ಉಪಸ್ಥಿತರಿದ್ದರು.