HomeFresh Newsಖಾಸಗಿ ಬಸ್ಸುಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕು...

ಖಾಸಗಿ ಬಸ್ಸುಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕು : ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್

ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಎಚ್ಚರಿಕೆ ನೀಡಿದರು.

mangalore dyfi protest

ನಗರದ ಕ್ಲಾಕ್ ಟವರ್ ಬಳಿ ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಓಡಾಟ ನಡೆಸಲು ಒತ್ತಾಯಿಸಿ ಹಾಗೂ ವಿವಿಧ ಸಾರಿಗೆ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಡಿವೈಎಫ್‍ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸುರತ್ಕಲ್ ಟೋಲ್ ಗೇಟ್ ಮುಚ್ಚಿ ಎಂಟು ತಿಂಗಳಾದರೂ ಟೋಲ್ ಹೆಸರಿನಲ್ಲಿ ಪ್ರಯಾಣಿಕರ ಟಿಕೆಟ್ ಮೇಲೆ 5 ರೂಪಾಯಿ ಸುಲಿಗೆ ಮಾಡುತ್ತಿರುವ ಖಾಸಗಿ ಬಸ್ಸು ಮಾಲಕರ ವಿರುದ್ಧ ಕ್ರಮ ಕೈಗೊಳ್ಳದೆ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆ ನಡೆಸದೆ ಜಿಲ್ಲಾಡಳಿತ ಲೂಟಿಯ ಪರವಾಗಿ ನಿಂತಿರುವುದನ್ನು ಖಂಡಿಸಿದರು. ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕೆಂದು ಕರೆ ನೀಡಿದರು.

ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ನಗರಕ್ಕೆ ಈಗಾಗಲೇ 68 ಮಂಜೂರಾಗಿರುವ ಸರಕಾರಿ ನರ್ಮ್ ಬಸ್ಸಿನಲ್ಲಿ 35 ಬಸ್ಸಷ್ಟೇ ಓಡಾಟ ಮಾಡುತ್ತಿದ್ದೆ ಬಾಕಿ ಸಂಚರಿಸಲು ಸರಕಾರಿ ಬಸ್ಸುಗಳ ಕೊರತೆ ನೀಗಿಸಲು ಕೆಎಸ್‍ಆರ್ಟಿಸಿ ಸಂಸ್ಥೆ ಸರಕಾರದ ಮುಂದಿಟ್ಟಿದ್ದೆ ಅದನ್ನು ಸರಕಾರ ಕೂಡಲೇ ಈ ಜಿಲ್ಲೆಗೆ ಹೊಸ ಬಸ್ಸುಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ್ ನಾಯಕ್ ಪ್ರತಿಭಟನಾ ಸ್ಥಳಕ್ಕಾಗಮಿಸಿ ಮನವಿಯನ್ನು ಸ್ವೀಕರಿಸಿದರು ಹಾಗೂ ಪ್ರತಿಭಟನಾಕಾರರು ಸಲ್ಲಿಸಿದ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿವೈಎಫ್‍ಐ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು, ನಗರ ಅಧ್ಯಕ್ಷರಾದ ಜಗದೀಶ್ ಬಜಾಲ್, ನಗರ ಕೋಶಾಧಿಕಾರಿ ತಯ್ಯೂಬ್ ಬೆಂಗರೆ, ಸೈಫರ್ ಆಲಿ, ರಫೀಕ್ ಹರೇಕಳ, ಹನೀಫ್ ಬೆಂಗರೆ, ಮುಸ್ತಫಾ ಕಲ್ಲಕಟ್ಟೆ, ಮನೋಜ್ ಉರ್ವಸ್ಟೋರ್, ರಿಹಾಬ್, ನಾಸಿರ್ , ಜೆರಾಲ್ಡ್ ಟವರ್ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments