ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಮುಚ್ಚುವಂತೆ ಪ್ರತಿಭಟನೆ

ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
