ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ: ಹರ್ಷ ವ್ಯಕ್ತಪಡಿಸಿದ ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.

ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.

ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ವಿದುದ್ದೀಕರಣ ಕಾಮಗಾರಿ ಯೋಜನೆ ಪೂರ್ಣಗೊಂಡ ಬಗ್ಗೆ ಪ್ರಕ್ರಿಯಿಸಿರುವ ಅವರು, ಈ ರೈಲು ಮಾರ್ಗದ ವಿದುದ್ದೀಕರಣ ಕಾರ್ಯ ಪೂರ್ಣಗೊಂಡಿರುವುದರಿಂದ ಬೆಂಗಳೂರು ಹಾಗೂ ಮಂಗಳೂರು ನಡುವಿನ ರೈಲು ಸಂಪರ್ಕ ಜಾಲ ಮಟ್ಟಷ್ಟು ಸುಧಾರಣೆಯಾಗಲಿದ್ದು, ಪ್ರಯಾಣಿಕರ ಸಂಚಾರದ ಜತೆಗೆ ಮಂಗಳೂರಿಗೆ ಸರಕು ಸಾಗಣೆ ಜತೆಗೆ ಬಂದರು ಹಾಗೂ ವ್ಯಾಪಾರ ಚಟುವಟಿಕೆಗಳ ವೃದ್ಧಿಗೂ ಮತ್ತಷ್ಟು ಅನುಕೂಲ ಕಲ್ಪಿಸಲಿದೆ. ಆ ಮೂಲಕ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಅತ್ಯಂತ ಪ್ರಮುಖ ರೈಲ್ವೆ ಮೂಲಸೌಕರ್ಯ ಸುಧಾರಿಸುವ ಬೇಡಿಕೆ ಈಡೇರಿದೆ ತಮ್ಮ ಅವಿರತ ಪರಿಶ್ರಮದ ಫಲ ಹಾಗೂ ನಿರಂತರ ಫಾಲೋಅಪ್‌ ನಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆವರೆಗಿನ 55 ಕಿಮೀ. ರೈಲು ಮಾರ್ಗ ವಿದ್ಯುದ್ದೀಕರಣಗೊಂಡಿದೆ ಎಂದು ಸಂಸತ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published.