HomeFresh Newsದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ : ಸಚಿವ ದಿನೇಶ್ ಗುಂಡೂರಾವ್...

ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ : ಸಚಿವ ದಿನೇಶ್ ಗುಂಡೂರಾವ್ ಗೆ ಆಮಂತ್ರಣ

ಮಂಗಳೂರು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ , ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ , ಕರ್ನಾಟಕ ಸರಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು – ಇವುಗಳ ಸಹಯೋಗದಲ್ಲಿ ಮೇ 16ರಂದು ಕಾಸರಗೋಡಿನ ಸುಬ್ಬಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಎ ಆರ್ ಸುಬ್ಬಯಕಟ್ಟೆ ಸಚಿವರನ್ನುಆಹ್ವಾನಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ದ. ಕ ಜಿಲ್ಲಾ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಮೆಸ್ಕಾಮ್ ಅಧ್ಯಕ್ಷ ಕೆ.ಹರೀಶ್ ಕುಮಾರ್ , ಕನ್ನಡ ಸಂಸ್ಕೃತಿ ಉತ್ಸವ ಸಮಿತಿ ಪ್ರಧಾನ ಸಂಚಾಲಕ ಅಶೋಕ್ ಭಂಡಾರಿ ಕುಡಾಲು, ಸಂಚಾಲಕ ರಾಘವ ಚೇರಾಲ್ , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ ಉಳಿಯತ್ತಡ್ಕ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments