HomeFresh Newsಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮತವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ ಮಂಗಳೂರು ಭಾಗದಲ್ಲಿ ಸ್ಯಾಕ್ಸೋಫೋನ್ ಗುರುಗಳಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಯಾಕ್ಸೋಫೋನ್ ಕಲಿಸಿಕೊಟ್ಟಿರುವ ಕೀರ್ತಿ ಅವರದ್ದು.

ಸುಂದರ ಸೇರಿಗಾರ್ ಅವರಲ್ಲಿ ಸ್ಯಾಕ್ಸೋಫೋನ್ ವಾದನವನ್ನು ಕಲಿತ ವಿದ್ಯಾರ್ಥಿಗಳು ಇಂದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಯಾಕ್ಸೋಫೋನ್ ವಾದನದ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಸುಂದರ ಸೇರಿಗಾರ್ ಅವರ ಮೊಮ್ಮಗಳು ಪೂಜಾ ದೇವಾಡಿಗ ಮುಂಬಯಿಯಲ್ಲಿ ಖ್ಯಾತ ಸ್ಯಾಕ್ಸೋಫೋನಿಸ್ಟ್ ಆಗಿದ್ದಾರೆ. ಇವರು ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.

ಸುಂದರ ಸೇರಿಗಾರ್ ಅವರು ಇಂಟರ್ನ್ಯಾಷನಲ್ ವರ್ಚುವಲ್ ಪೀಸ್ ಯುನಿವರ್ಸಿಟಿ ಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಗೌರವವನ್ನು ಕೂಡಾ ಪಡೆದಿದ್ದರು.

ಸುಂದರ ಸೇರಿಗಾರ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಇವರು ಮಹಿಳೆಯರಿಗೆ ಸ್ಯಾಕ್ಸೋಫೋನ್ ತರಬೇತಿಯನ್ನು ನೀಡಿದವರಲ್ಲಿ ಪ್ರಥಮತರು. ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡಾ ಲಭಿಸಿತ್ತು. ಕರ್ನಾಟಕ ಮಾತ್ರವಲ್ಲದೇ ಕೇರಳ, ಹೈದರಾಬಾದ್, ತಮಿಳುನಾಡು, ಗೋವಾ, ಮುಂಬಯಿ, ಮತ್ತು ದೇಶದ ವಿವಿಧ ಭಾಗಗಳಲ್ಲಿ ಸ್ಯಾಕ್ಸೋಫೋನ್ ತರಗತಿಗಳನ್ನು ನಡೆಸಿಕೊಟ್ಟಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ, ಉತ್ಸವ ಸಂಧರ್ಭದಲ್ಲಿ ಸುಂದರ ಸೇರಿಗಾರ್ ಅವರು ಸೇವೆಯನ್ನು ನಡೆಸಿಕೊಡುತ್ತಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments