ಮೂಡುಬಿದಿರೆ : ಸಹಕಾರಿ ಕ್ಷೇತ್ರಕ್ಕಿಳಿದ ಮಾಜಿ ಸಚಿವ ಅಭಯಚಂದ್ರ ಜೈನ್
ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.
ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಯಚಂದ್ರ ಜೈನ್ ಕೆ. ಅವರು ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಮೂಲ್ಕಿ ಮೂಡುಬಿದಿರೆಯಲ್ಲಿ ಜನ ಮಾನಸದಲ್ಲಿ ನೆನಪಿಡುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.
ಮೂಡುಬಿದಿರೆ ಸಮಾಜ ಮಂದಿರ ಸಭಾ ಮತ್ತು ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಾಗೂ ಮೂಡುಬಿದಿರೆ ಜಿ.ವಿ.ಪೈ.ಟ್ರಸ್ಟ್ ನ ಉಪಾಧ್ಯಕ್ಷರಾಗಿ ಉತ್ತಮ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿರುತ್ತಾರೆ.
ಎಂಸಿಎಸ್ ಬ್ಯಾಂಕಿನ ಈ ಬಾರಿಯ “ಕಲ್ಪವೃಕ್ಷ” ಪ್ರಶಸ್ತಿಗೆ ಭಾಜನರಾಗಿರುವ ಅಭಯಚಂದ್ರ ಅವರು ಸಹಕಾರಿ ಕ್ಷೇತ್ರದ ಮೂಲಕ ಇನ್ನಷ್ಟು ಜನರಿಗೆ ಸದುಪಯೋಗವಾಗುವ ಯೋಚನೆಯೊಂದಿಗೆ “ಬ್ಯಾಟ್ಸ್ ಮೆನ್” ಚಿಹ್ನೆಯೊಂದಿಗೆ ಕಣಕ್ಕಿಳಿದಿದ್ದಾರೆ.
*ಒಲಿಯಲಿದೆಯೇ ಅಧ್ಯಕ್ಷ ಪಟ್ಟ
ಸಹಕಾರಿ ಕ್ಷೇತ್ರಕ್ಕೆ ಇದೇ ಮೊದಲ ಬಾರಿಯಾಗಿ ಸ್ಪರ್ಧಿಸುತ್ತಿರುವ ಅಭಯಚಂದ್ರ ಜೈನ್ ಅವರಿಗೆ ಇದೀಗ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲಾ ನಿರ್ದೇಶಕರುಗಳು ಕೂಡಾ ಆತ್ಮೀಯರಾಗಿದ್ದಾರೆ. ಆದ್ದರಿಂದ ಮುಂದಿನ ಸಾಲಿನಲ್ಲಿ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಗಾಧಿಯ ಪಟ್ಟ ಒಲಿಯುವ ಎಲ್ಲಾ ಲಕ್ಷಣಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿದೆ.