ಮೂಡುಬಿದಿರೆ ಎಕ್ಸಲೆಂಟ್ ಯುವರಾಜ್ ಜೈನ್ ಅವರಿಗೆ ಸಿರಿಪುರ ಪ್ರಶಸ್ತಿ

ಮೂಡುಬಿದಿರೆ : ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಅವರನ್ನು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ- 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗುತ್ತಿದೆ. ಉಪನ್ಯಾಸಕರಾಗಿ, ಕಲ್ಲಬೆಟ್ಟು ಎಂಬ ಗ್ರಾಮೀಣ ಪ್ರದೇಶದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಪ್ರವರ್ತಕರಾಗಿ, ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಅವರಿಗೆ ಮೂಡಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿವೆಂಕಟರಮಣ ದೇವಾಲಯದ ಶಾರದ ಮಹೋತ್ಸವದ ಸಂದರ್ಭದಲ್ಲಿ ಸೆ 10ರಂದು ನಡೆಯುವ ಮೂಡುಬಿದಿರೆ ದಸರಾ-2024ರ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಸಿರಿಪುರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಶಿರೂರು ತಿಳಿಸಿದ್ದಾರೆ.

Related Posts

Leave a Reply

Your email address will not be published.