ಫಾಜಿಲ್ ಹತ್ಯೆ ಪ್ರಕರಣ ಆರು ಮಂದಿ ಆರೋಪಿಗಳ ಬಂಧನ
ಸುರತ್ಕಲ್‍ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಮಾಹಿತಿ ನಿಡಿದರು. ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ ಸಂಖ್ಯೆ ಪತ್ತೆ ಹಚ್ಚಿ ಅದರ ಮಾಲಕ ಚೇತನ್ ಕ್ರಾಸ್ತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ. ಆತನ ಮಾಹಿತಿಯಂತೆ ಕಾರ್ಯ ಪ್ರವೃತ್ತರಾದ ಪೆÇಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.