ವಿಜಯಪುರದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಗೊಲ್ಲಾಳೇಶ್ವರ ರಥೋತ್ಸವದ ಹಿನ್ನೆಲೆಯಲ್ಲಿ ಸಾಹೇಬಪಟೇಲ್ ಖಾಜಾಪಟೇಲ್ ಎಂಬವರು ರಥದ ತುತ್ತ ತುದಿಯಲ್ಲಿ ಕಲಶ ಕಟ್ಟುತ್ತಿದ್ದರು. ಈ ವೇಳೆ ಸಾಹೇಬಪಟೇಲ್ ಅವರು ಕಾಲು ಜಾರಿ ರಥದಿಂದ ಬಿದ್ದಿದ್ದಾರೆ ಎನ್ನಲಾಗಿದೆ.

ಕಲಶ ಕಟ್ಟುವಾಗ ಕೈಯಲ್ಲಿದ್ದ ಹಗ್ಗ ಜಾರಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಗ್ರಾಮಸ್ಥರು ಗಾಯಾಳು ಸಾಹೇಬಪಟೇಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯ ದೃಶ್ಯಾವಳಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಿಕೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
