ಉಡುಪಿ : ಕೈಮಗ್ಗ ಸೀರೆಗಳ ಉತ್ಸವ

ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಿತು.

Festival of Handloom Sarees

ಮೂರು ದಿನದ ಕೈಮಗ್ಗ ಸೀರೆಗಳ ಉತ್ಸವಕ್ಕೆ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಚಾಲನೆ ನೀಡಿದರು.
ಉದ್ಯಮಿ ಪ್ರಸಾದ್‍ರಾಜ್ ಕಾಂಚನ್ ಮಾತನಾಡಿ, ಕುಲ ಕಸಬುಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆಯನ್ನು ಬೆಳೆಸಿಕೊಳ್ಳ ಬೇಕು ಎಂದರು.

Festival of Handloom Sarees

ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ ವಹಿಸಿದ್ದರು. ಆಯೋಜನಾ ಸಮಿತಿಯ ಗೌರವಾಧ್ಯಕ್ಷ ಡಾ.ಜಗದೀಶ್ ಶೆಟ್ಟಿಗಾರ್ ಆತ್ರಾಡಿ, ನಗರಸಭೆ ಸದಸ್ಯ ರಜನಿ ಹೆಬ್ಬಾರ್, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ನೇಕಾರ ವೇದಿಕೆಯ ಸಂಚಾಲಕ ಡಾ.ಶಿವ ಪ್ರಸಾದ್ ಕಾರ್ಕಳ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಶಿವ ಶಂಕರ್, ಆಯೋಜನಾ ಸಮಿತಿಯ ಅಧ್ಯಕ್ಷ ಮಂಜುನಾಥ ಮಣಿಪಾಲ್ ,ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಕಾರ್ಯಾಧ್ಯಕ್ಷ ರಘು ಶ್ರೀನಿವಾಸ ಶೆಟ್ಟಿಗಾರ್, ಪ್ರಮುಖರಾದ ಜಯರಾಮ್ ಶೆಟ್ಟಿಗಾರ್, ಸತೀಶ್ ಶೆಟ್ಟಿಗಾರ್ ಆತ್ರಾಡಿ ನಾನಾ ದೇವಸ್ಥಾನಗಳ ಮೋಕ್ತೇಸರರುಗಳು, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಮೇರಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.