HomeFresh Newsಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಸವಾರ

ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ: ಅಪಾಯದಿಂದ ಪಾರಾದ ಸವಾರ

ಉಡುಪಿಯಲ್ಲಿ ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಉಡುಪಿ ನಗರದಲ್ಲಿ ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕಗೊಂಡ ಸವಾರ, ರಸ್ತೆ ಮಧ್ಯೆಯೇ ಸ್ಕೂಟರ್ ನಿಲ್ಲಿಸಿ ತಕ್ಷಣ ದೂರ ಓಡಿ ಹೋಗಿದ್ದಾನೆ.

ಕ್ಷಣಾರ್ಧದಲ್ಲೇ ಸ್ಕೂಟರ್ ಹೊತ್ತಿ ಉರಿದಿದ್ದು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ನೀರು ಸುರಿದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಸವಾರನಿಗೆ ಯಾವುದೇ ಅಪಾಯವಾಗಿಲ್ಲ. ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments