ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ : ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ ಕಾರ್ಯಕ್ರಮ

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಉಡುಪಿಯ ಸಮಸ್ತ ಮೀನುಗಾರರ ವತಿಯಿಂದ ಅಭಿನಂದನಾ ಸಮಾರಂಭ ನಡೆಯಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಮಾತನಾಡಿ, ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಗೊಳಿಸುವಂತೆ ಸಚಿವರಲ್ಲಿ ಮನವಿ ಮಾಡಿದ ಅವರು, ಕಡಲ್ಕೊರೆತ ಪ್ರದೇಶಗಳ ಬಗ್ಗೆ ಪ್ರಸ್ತಾಪಿಸಿ ಕಡಲ್ಕೊರೆತ ಬಾದಿತ ಪ್ರದೇಶಗಳಲ್ಲಿ ತಡೆಗೋಡೆ ಹಾಗೂ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಮನವಿ ಮಾಡಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಚಿವರು, ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಾಡೋಜ ಡಾ. ಜಿ. ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಣ್ಯರಾದ ಆನಂದ ಸಿ ಕುಂದರ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.