HomeFresh Newsಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ - ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಅಂಗಳಕ್ಕೆ...

ಶಿಶಿಲ ಕಪಿಲ ನದಿಯಲ್ಲಿ ಉಕ್ಕಿ ಹರಿದು ಬಂದ ಪ್ರವಾಹ – ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಅಂಗಳಕ್ಕೆ ನುಗ್ಗಿದ ನೀರು

ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ.


ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments