HomeFresh Newsಆಳ್ವಾಸ್ ಪ್ರಗತಿ–2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್‌ಗಳ ವ್ಯವಸ್ಥೆ 

ಆಳ್ವಾಸ್ ಪ್ರಗತಿ–2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್‌ಗಳ ವ್ಯವಸ್ಥೆ 

ಬಂಟ್ವಾಳ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದ್ರೆ ವತಿಯಿಂದ ಆಯೋಜಿಸಲಾದ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಬಂಟ್ವಾಳದಿಂದ ಗುರುವಾರ ಎರಡು ಉಚಿತ ಬಸ್‌ಗಳನ್ನು ವ್ಯವಸ್ಥೆ ಮಾಡಲಾಯಿತು.

ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಮುಂದಾಳತ್ವದಲ್ಲಿ ಈ ಉಚಿತ ಬಸ್ ಸೇವೆ ಕಲ್ಪಿಸಲಾಗಿತ್ತು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಮೀಪದಿಂದ ಬೆಳಿಗ್ಗೆ ಬಸ್‌ಗಳು ಹೊರಟಿದ್ದು, ಉದ್ಯೋಗಾಕಾಂಕ್ಷಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದು ಮೂಡಬಿದ್ರೆಯತ್ತ ಪ್ರಯಾಣ ಬೆಳೆಸಿದರು.

ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಸುಲಭವಾಗಿ ಭಾಗವಹಿಸಲು ಈ ಉಚಿತ ಸಾರಿಗೆ ವ್ಯವಸ್ಥೆ ನೆರವಾಗಿದ್ದು, ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಯುವಜನರಿಗೆ ಇಂತಹ ಸಾರಿಗೆ ಸೌಲಭ್ಯಗಳು ಹೆಚ್ಚಿನ ನೆರವಾಗಲಿದ್ದು, ಆಳ್ವಾಸ್ ಪ್ರಗತಿ–2026 ಉದ್ಯೋಗ ಮೇಳಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದಲೂ ಅಭ್ಯರ್ಥಿಗಳು ಆಗಮಿಸುತ್ತಿದ್ದಾರೆ.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments