HomeFresh Newsಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ಸಂತಾನ ಸಮಸ್ಯೆಗಳಿಗೆ ಉಚಿತ ಸಮಾಲೋಚನಾ ಶಿಬಿರ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವತಿಯಿಂದ ಸಂತಾನ ಸಮಸ್ಯೆಗಳಿಗೆ ಉಚಿತ ಸಮಾಲೋಚನಾ ಶಿಬಿರ

ಪಡುಬಿದ್ರಿ, ನ. 17: 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹಾಗೂ ರೋಟರಿ ಕ್ಲಬ್ ಪಡುಬಿದ್ರಿ ಇವರ ಸಹಯೋಗದಲ್ಲಿ ಸಂತಾನ ಸಮಸ್ಯೆಗಳಿಗೆ ಉಚಿತ ಸಮಾಲೋಚನಾ ಶಿಬಿರವನ್ನು ಆಯೋಜಿಸಲಾಯಿತು.
ಪಡುಬಿದ್ರಿಯ ಸೊಸೈಟಿಯ ‘ವೈ ಹಿರಿಯಣ್ಣ’ ಸಭಾಂಗಣದಲ್ಲಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ಡಾ. ಪಯಸ್ವಿನಿ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನೋವಾ ಐವಿಎಫ್ ಫರ್ಟಿಲಿಟಿ ಸೆಂಟರ್‌ನ ಸಲಹೆಗಾರರಾದ ಡಾ. ವಿವೇಕವಾಣಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂತಾನ ಸಮಸ್ಯೆಗಳು, ಅವುಗಳಿಗೆ ಲಭ್ಯವಿರುವ ವೈದ್ಯಕೀಯ ಪರಿಹಾರಗಳು ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಮಾಹಿತಿ ಮತ್ತು ಸಮಾಲೋಚನೆ ನೀಡಿದರು.
ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರಾದ ರಾಜಾರಾಮ್ ರಾವ್, ಕೃಷ್ಣ ಬಂಗೇರ, ರೋಹಿಣಿ, ಕಾಂಚನ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್. ಹಾಗೂ ಸೊಸೈಟಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಿ.ಎಚ್.ಒ. ಶಕುಂತಳ, ನೋವಾ ಐವಿಎಫ್ ಫರ್ಟಿಲಿಟಿ ಸೆಂಟರ್‌ನ ಎನ್.ಎಫ್.ಸಿ. ಮ್ಯಾನೇಜರ್ ಹರ್ಷ, ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಪಡುಬಿದ್ರಿ, ರೋಟರಿ ಕ್ಲಬ್ ಪಡುಬಿದ್ರಿ ಕಾರ್ಯದರ್ಶಿ ಕಾರ್ತಿಕ್ ಕರ್ಕೇರ ಹಾಗೂ ರೋಟರಿ ಕ್ಲಬ್‌ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಸಂತಾನ ಸಮಸ್ಯೆ ಎದುರಿಸುತ್ತಿರುವ ದಂಪತಿಗಳಿಗೆ ಸೂಕ್ತ ವೈದ್ಯಕೀಯ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments