ಉಡುಪಿ:ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.), ಬೆಂಗಳೂರು ಇವರಿಂದ ಜಿಲ್ಲಾ ಅನುದಾನಿತ ಶಾಲಾ ಸಂಘಗಳು, ಉಡುಪಿ ಇವರ ಸಹಯೋಗದೊಂದಿಗೆ ಇಂದು ದಿನಾಂಕ 20-06-2026 ರಂದು ಯಕ್ಷಗಾನ ಕಲಾರಂಗ ಉಡುಪಿ ಇಲ್ಲಿ ಆಯೋಜಿಸಲಾದ “ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 20,000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ ಪ್ರಶಸ್ತಿ ಮತ್ತು ವೆಬ್ ಸೈಟ್ ಅನಾವರಣ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರವೀಂದ್ರನಾಥ ಶಾನುಭಾಗ್, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಶ್ರೀ ಮುರಳಿ ಕಡೆಕಾರು, ಜಿಲ್ಲಾ ಅನುದಾನಿತ ಪ್ರೌಢಶಾಲೆಗಳ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಡಾ. ಜಯಶೀಲ ಶೆಟ್ಟಿ ಕಂದಾವರ, ಜಿಲ್ಲಾ ಪ್ರಾಥಮಿಕ ಅನುದಾನಿತ ಶಾಲಾ ಸಂಘದ ಅಧ್ಯಕ್ಷರಾದ ಶ್ರೀ ಕೆ. ಅರುಣ್ ಕುಮಾರ್ ಶೆಟ್ಟಿ, ಟ್ರಸ್ಟಿನ ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

