Header Ads
Breaking News

ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟು ಪ್ಯಾಕೇಜ್ ಘೋಷಣೆ ಮಾಡಲಿ : ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಅಹಮ್ಮದ್

ಕಾರ್ಕಳ: ಕೊರೋನಾ ಮಹಾಮಾರಿ ಬಡವರ್ಗ ಮತ್ತು ಸಾಮಾನ್ಯ ವರ್ಗದ ಬಾಳನ್ನೇ ಕಸಿದುಕೊಂಡಿದೆ. ಈ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಯವರು ಕೆಲ ವರ್ಗದವರಿಗೆ ವಿಶೇಷ ಆರ್ಥಿಕ ಪ್ಯಾಕೇಜನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಎಲ್ಲ ವರ್ಗದವರನ್ನು ಗಮನದಲ್ಲಿ ಇಟ್ಟುಕೊಂಡು ವಿಶೇಷ ಆರ್ಥಿಕ ಪ್ಯಾಕೇಜನ್ನು ಬಿಡುಗಡೆ ಮಾಡಿದ್ದರೆ ಇನ್ನೂ ಕೆಲವರಿಗೆ ಪ್ರಯೋಜನವಾಗುತ್ತಿತ್ತು ಎಂದು ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಅಹಮದ್ ಹೇಳಿದರು.
ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಕೊರೊನಾದ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಶೇಷವಾಗಿ ಖಾಸಗಿ ಬಸ್ ಸಿಬಂದಿಗಳು, ಛಾಯಾಗ್ರಾಹಕರು, ಪತ್ರಿಕಾರಂಗದಲ್ಲಿ ದುಡಿಯುತ್ತಿರುವ ಪತ್ರಕರ್ತರು ಹಾಗೂ ಕೂಲಿ ಕಾರ್ಮಿಕರು ಈ ಸಂದರ್ಭದಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುತ್ತಾರೆ. ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರಿಗೆ ಆರ್ಥಿಕ ಸಹಕಾರವನ್ನು ನೀಡುವ ಬಗ್ಗೆ ಸಹಾಯ ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಅಹಮದ್ ವಿ4 ಮಾಧ್ಯಮದ ಮೂಲಕ ಮನವಿಯನ್ನು ಮಾಡಿಕೊಂಡರು.

Related posts

Leave a Reply

Your email address will not be published. Required fields are marked *