Header Ads
Breaking News

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ

ಹಾಸನ: ವಿದ್ಯಾರ್ಥಿಗಳ ಹಿಂದಿನ ಅಂಕಗಳನ್ನು ಪರಿಗಣಿಸಿ ಪರೀಕ್ಷೆ ಇಲ್ಲದೆ ಪಾಸ್ ಮಾಡುವಂತೆ ಸರ್ಕಾರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.


ಹಾಸನ ನಗರದ ಎನ್ನಾರ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮಾತನಾಡಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣ ಮಾಡಬೇಕು ಹಾಗೂ ಶಿಕ್ಷಣ ಮಂತ್ರಿಗಳು ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ತಜ್ಞರ ಸಮಿತಿಯನ್ನು ನೇಮಕ ಮಾಡಿ ಸಮಿತಿಯ ವರದಿಯ ಮಾನದಂಡದ ಮೇಲೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು.  ಖಾಸಗಿ ಶಾಲೆಗಳ ವಿಧಿಸುತ್ತಿರುವ ಶುಲ್ಕದಿಂದ ಬಡ ಮಕ್ಕಳು ತುಂಬಾ ಸಂಕಷ್ಟದಲ್ಲಿದ್ದಾರೆ ಆದ್ದರಿಂದ ಮುಖ್ಯಮಂತ್ರಿಗಳು ಈ ವಿಚಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

Related posts

Leave a Reply

Your email address will not be published. Required fields are marked *