Header Ads
Breaking News

ಕಾರ್ಕಳ : ಎಸ್‍ಸಿಡಿಸಿಸಿ ಬ್ಯಾಂಕ್ ವತಿಯಿಂದ ಪೊಲೀಸ್ ಇಲಾಖೆಗೆ ಮತ್ತು ಆರೋಗ್ಯ ಇಲಾಖೆಗೆ ಮಾಸ್ಕ್ ವಿತರಣೆ

ಎಸ್‍ಸಿಡಿಸಿಸಿ ಬ್ಯಾಂಕ್ ವತಿಯಿಂದ ಪೊಲೀಸ್ ಇಲಾಖೆಗೆ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣಾ ಕಾರ್ಯಕ್ರಮವು ಕಾರ್ಕಳದ ಶಾಸಕರ ಕಚೇರಿಯಲ್ಲಿ ನಡೆಯಿತು.

ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಇಲಾಖೆಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಅವರು, ತೀವ್ರ ಸಂಕಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುವಂತ ಆರೋಗ್ಯ ಇಲಾಖೆ ಪೆÇಲೀಸ್ ಇಲಾಖೆಗಳನ್ನು ಗುರುತಿಸಿ ಡಾ. ಎಂ.ಎನ್ ರಾಜೇಂದ್ರ ಕುಮಾರ್ ತಮ್ಮ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಿರುತ್ತಾರೆ. ಡಾ. ಎಂ.ಎನ್. ರಾಜೇಂದ್ರಕುಮಾರ್ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ನಮ್ಮ ಜೊತೆ ಇದ್ದು ನಮಗೆ ಧೈರ್ಯವನ್ನು ತುಂಬುತ್ತಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭ ವೇದಿಕೆಯಲ್ಲಿ ಸುನಿಲ್ ಬಜಗೋಳಿ, ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್, ಕಾರ್ಕಳ ವೈದ್ಯಾಧಿಕಾರಿ ಕೆ. ಎಸ್. ರಾವ್ ತಾಲೂಕು ವೈದ್ಯಾಧಿಕಾರಿ ಕೃಷ್ಣನಂದ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *